ವಿಮರ್ಶೆ
ನವೋದಯ ಕಾಲದ ಕಾದಂಬರಿಗಳು ಚರಿತ್ರೆ, ಜೀವನ ದೃಷ್ಟಿ, ವಾಸ್ತವತೆ, ನಿರೂಪಣೆ, ಕಾಲ ಹಾಗೂ ಪ್ರಶ್ನೆಗಳು
ಲೇಖಕ: ಕೇಶವ ಶರ್ಮ. ಕೆ
₹405₹47515% ಉಳಿತಾಯ
ಎಲ್ಲಾ ತೆರಿಗೆಗಳು ಸೇರಿವೆ
ಸ್ಟಾಕ್‌ನಲ್ಲಿದೆ (ಲಭ್ಯವಿದೆ)
ವೇಗದ ವಿತರಣೆ
5-7 ದಿನಗಳು
ಸುರಕ್ಷಿತ ಪಾವತಿ
100% ಸುರಕ್ಷಿತ
ಸುಲಭ ಮರುಪಾವತಿ
7 ದಿನಗಳು
ಪುಸ್ತಕದ ವಿವರಗಳು
ವಿವರಣೆ
ಭಾರತೀಯ ಮೇಲು ಜಾತಿಯ ಜನರಿಗೆ ಸಂಸ್ಕೃತದ ಪರಂಪರೆ ಮತ್ತು ಪ್ರಾದೇಶಿಕ ಭಾಷೆಗಳ ಸಾಹಿತ್ಯಿಕ ಪರಂಪರೆಯ ಅರಿವು ಇತ್ತು. ಮತ್ತು ಸಾಹಿತ್ಯ ಪರಂಪರೆಯ ಜ್ಞಾನ ಮತ್ತು ವಸಾಹತು ಶಿಕ್ಷಣದ ಪರಿಚಯದ ಸಂಧಿಕಾಲದ ಮನಸ್ಸು ಕಾದಂಬರಿಯಲ್ಲಿ ವಿಶಿಷ್ಟ ನಿರೂಪಣೆಗೆ ಕಾರಣವಾಯಿತು. ಯಾವಾಗ ವಸಾಹತುಶಾಹಿ ಶಿಕ್ಷಣ ಕ್ರಮಗಳು ಭಾರತದಲ್ಲಿ ಪ್ರಬಲವಾಗಿ ಬೇರೂರಿದವೋ ಆಗ ಭಾರತೀಯ ಮತ್ತು ದೇಶೀಯ ಸಾಹಿತ್ಯ ಪರಂಪರೆಯ ಬಗೆಗಿನ ಅಧ್ಯಯನ ಕ್ರಮಗಳು ಬೇರೆಯಾದವು. ೧೮೩೦ರ ವೇಳೆಗಾಗಲೇ ಬ್ರಿಟೀಷ್ ಶಿಕ್ಷಣ ನೀತಿಯು ಬದಲಾಗಲು ತೊಡಗಿತ್ತು. ಇದರಿಂದಾಗಿ ದೇಶೀಯ ಶಿಕ್ಷಣದಲ್ಲಿ ಪೌರ‍್ಯಾತ್ಯ ಭಾಷೆ ಮತ್ತು ಅಧ್ಯಯನ ಕ್ರಮಗಳು ಬದಲಾದವು. ೧೮೩೫ರಲ್ಲಿ ಬಂದ ಬೆಂಟಿಂಕ್‌ನ ಶಿಕ್ಷಣ ಕಾಯಿದೆ ಮತ್ತು ಅದೇ ವರ್ಷದ ಮೆಕಾಲೆಯ ಸೂತ್ರ ದೇಶೀಯ ಶಿಕ್ಷಣ ಪದ್ಧತಿಯ ಮೇಲೆ ಪರಿಣಾಮ ಬೀರಿದವು. ಬೆಂಟಿಂಕನ ಶಿಕ್ಷಣ ಸೂತ್ರದಲ್ಲಿ ಇಂಗ್ಲೀಷ್ ಶಿಕ್ಷಣದ ನಯವಾದ ಸೂತ್ರವನ್ನು ಕಂಡರೆ ಮೆಕಾಲೆಯದು ಇಂಗ್ಲೀಷಿನ ಪರವಾದ ಬಿಗಿಯಾದ ದೃಷ್ಟಿ. ಮೆಕಾಲೆಯ ಶಿಕ್ಷಣ ನೀತಿಯ ಪರಿಣಾಮ ಮಾತ್ರ ತುಂಬಾ ದೊಡ್ಡದು. ವಸಾಹತುಶಾಹಿ ಶಿಕ್ಷಣ ಕ್ರಮದಲ್ಲಿ ಕೆಲವು ಪರಿಕಲ್ಪನೆಗಳು ಆಂತರಿಕವಾಗಿ ಕೆಲಸ ಮಾಡುತ್ತಿದ್ದುದು ಗಮನಾರ್ಹ.
ವಿಶೇಷತೆಗಳು
| ISBN | - |
| ಭಾಷೆ | ಕನ್ನಡ |
| ಪುಟಗಳು | 392 |
| ಪ್ರಕಟಣೆ ವರ್ಷ | 2024 |
| ಆವೃತ್ತಿ | 1st |
| ತೂಕ | 800 ಗ್ರಾಂ |
| ಆಯಾಮಗಳು | - |





